TSK

TSK · ಆದಿಕಾಂಡ 34:5

مراجع Treasury of Scripture Knowledge في ಕನ್ನಡ IRV.

العودة إلى المقطع

ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ, ಹೋಗು” ಎಂದು ಹೇಳಿದನು. ಅದಕ್ಕೆ ಅವನು, “ಆಗಲಿ, ಹೋಗುತ್ತೇನೆ” ಎಂದನು.

ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.

ಅನಂತರ ಸಮುವೇಲನು ಇಷಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ” ಎಂದು ಕೇಳಲು ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿರುತ್ತಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಕರೆದುಕೊಂಡು ಬರಲು ತಿಳಿಸು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು” ಎಂದು ಹೇಳಲು ಇಷಯನು ಅವನನ್ನು ಕರೆದು ಕರೆದುಕೊಂಡು ಬರಲು ತಿಳಿಸಿದನು.

ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೆಯ ಮಾತುಗಳನ್ನಾಗಲಿ ಕೆಟ್ಟ ಮಾತುಗಳನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು.

‹ಆದರೆ ಅವನ ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿರುವಾಗ ವಾದ್ಯಘೋಷಗಳನ್ನೂ ನರ್ತನಗಳನ್ನು ಕೇಳಿ,›