TSK

TSK · ಆದಿಕಾಂಡ 36:8

مراجع Treasury of Scripture Knowledge في ಕನ್ನಡ IRV.

العودة إلى المقطع

ಇದಲ್ಲದೆ ಸೇಯೀರೆಂಬ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಹೋರಿಯರನ್ನು, ಅಲ್ಲೇ ಸೋಲಿಸಿ ಮರಳುಗಾಡಿನ ಹತ್ತಿರವಿರುವ ಎಲ್ಪಾರಾನಿನ ವರೆಗೂ ಹಿಂದಟ್ಟಿದನು.

¶ ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು.

ಮಗ್ದೀಯೇಲ್ ಗೀರಾಮ್ ಇವರೇ ತಮ್ಮ ದೇಶದ ನಿವಾಸ ಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಈ ಎದೋಮ್ಯರ ಮೂಲ ಪುರುಷನೇ ಏಸಾವನು.

ಇಸಾಕನಿಗೆ ಯಾಕೋಬ, ಏಸಾವ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿ, ಏಸಾವನಿಗೆ ಸೇಯೀರ್ ಪರ್ವತವನ್ನೂ ಸ್ವತ್ತಾಗಿ ದಯಪಾಲಿಸಿದೆನು. ಯಾಕೋಬನಾದರೋ ತನ್ನ ಮಕ್ಕಳ ಸಹಿತವಾಗಿ ಐಗುಪ್ತ ದೇಶಕ್ಕೆ ಹೋದನು.

ಇದಲ್ಲದೆ ಸಿಮೆಯೋನನ ಕುಲದ ಐನೂರು ಜನರು ಸೇಯೀರ್ ಪರ್ವತಕ್ಕೆ ಹೋದರು. ಇಷ್ಷೀಯ ಮಕ್ಕಳಾದ ಪೆಲಟ್ಯ, ನೆಗರ್ಯ, ರೆಫಾಯ ಮತ್ತು ಉಜ್ಜೀಯೇಲ್ ಎಂಬುವವರು ಅವರ ಮುಖ್ಯಸ್ಥರು.

ಅಮ್ಮೋನಿಯರೂ, ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಸಂಪೂರ್ಣವಾಗಿ ಸಂಹರಿಸಿಬಿಟ್ಟರು. ಅಮ್ಮೋನಿಯರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.

¶ ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋಮನ್ನು ಕುರಿತು ಹೀಗೆ ನುಡಿಯುತ್ತಾನೆ: ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ. ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ಹೊರಡಿರಿ! ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳೋಣ”

“ಆದರೆ ನಾನು ಯಾಕೋಬನನ್ನು ಪ್ರೀತಿಸಿ, ಏಸಾವನನ್ನು ದ್ವೇಷಿಸಿ, ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಪಿತ್ರಾರ್ಜಿತ ಆಸ್ತಿಯನ್ನು ಕಾಡುನರಿಗಳ ಪಾಲುಮಾಡಿದ್ದೇನಷ್ಟೆ” ಇದು ಯೆಹೋವನ ನುಡಿ.