TSK

TSK · ಆದಿಕಾಂಡ 37:20

مراجع Treasury of Scripture Knowledge في ಕನ್ನಡ IRV.

العودة إلى المقطع

ಕೇಳು, ನೀನು ಹೇಗೂ ಅರಸನಾಗುವಿ ಎಂದೂ ಇಸ್ರಾಯೇಲ್ ರಾಜ್ಯವು ನಿನ್ನಿಂದ ಸ್ಥಿರವಾಗುವುದೆಂದು ಬಲ್ಲೆನು.

ದೇವರ ಮನುಷ್ಯನು ಸ್ವಲ್ಪ ದೂರ ಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದು ಹಾಕಿತು. ಅವನ ಶವವು ದಾರಿಯಲ್ಲಿಯೇ ಬಿದ್ದಿತ್ತು. ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.

ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ.

ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ.

ಅವು ಯಾವುವೆಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷಿಗಳ ರಕ್ತವನ್ನು ಸುರಿಸುವ ಕೈ,

ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ.

“ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು.

‹ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?›

“ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ.