TSK

TSK · ಆದಿಕಾಂಡ 37:24

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು.

ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ, ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.

ನನ್ನ ಆಪ್ತರು ನನ್ನನ್ನು ನೋಡಿ ಅಸಹ್ಯಪಟ್ಟರು, ನನ್ನನ್ನು ಅವರು ಹೇಸಿ ಬಿಟ್ಟುಹೋಗುವಂತೆ ಮಾಡಿದ್ದೀ; ಸಿಕ್ಕಿಬಿಟ್ಟಿದ್ದೇನೆ, ಬಿಡಿಸಿಕೊಳ್ಳಲಾರೆನು.

ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.

ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.