TSK

TSK · ಆದಿಕಾಂಡ 37:28

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಒಂಟೆಗಳ ಮೇಲೆ ಪರಿಮಳ ದ್ರವ್ಯ, ಸುಗಂಧ ತೈಲ, ರಕ್ತಬೋಳ, ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು.

¶ ಯೋಸೇಫನನ್ನು ಕ್ರಯಕ್ಕೆ ತೆಗೆದುಕೊಂಡು ಹೋಗಿದ್ದ ಇಷ್ಮಾಯೇಲರು ಐಗುಪ್ತ ದೇಶಕ್ಕೆ ಹೋದರು. ಅಲ್ಲಿ ಒಬ್ಬ ಐಗುಪ್ತ್ಯನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು. ಇವನು ಫರೋಹನ ಉದ್ಯೋಗಸ್ಥನು, ಐಗುಪ್ತರ ದಂಡಿನ ಮುಖ್ಯಸ್ಥನು ಆಗಿದ್ದ ಪೋಟೀಫರನು ಎಂಬುವನಾಗಿದ್ದನು.

ಯೋಸೇಫನು, “ನನ್ನ ಹತ್ತಿರಕ್ಕೆ ದಯಮಾಡಿ ಬನ್ನಿರಿ” ಎಂದು ಅಣ್ಣಂದಿರಿಗೆ ಹೇಳಲು ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ “ಐಗುಪ್ತ ದೇಶಕ್ಕೆ ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನು ನಾನೇ.

¶ ಯಾರಾದರೂ ಒಬ್ಬ ಮನುಷ್ಯನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ ಅಥವಾ ಅವನು ಬಂಧಿಸಲ್ಪಟ್ಟಾಗ, ಅಪಹರಿಸಲ್ಪಟ್ಟವನು ಅವನೊಂದಿಗಿದ್ದರೆ ಅವನಿಗೆ ಮರಣಶಿಕ್ಷೆಯಾಗಬೇಕು.

ಹತವಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರಲ್ಲಿ ಗೋತ್ರ ಪ್ರಧಾನನಾದ ಚೂರ್ ಎಂಬುವನ ಮಗಳು.

“ನೀನು ಇಸ್ರಾಯೇಲರಿಗೋಸ್ಕರ ಮಿದ್ಯಾನ್ಯರಿಗೆ ಪ್ರತಿದಂಡನೆಯನ್ನು ಮಾಡಬೇಕು. ಅನಂತರ ನೀನು ಪೂರ್ವಿಕರ ಬಳಿಗೆ ಸೇರಬೇಕು” ಎಂದು ಹೇಳಿದನು.

¶ ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದ್ದರಿಂದ ಆತನು ಅವರನ್ನು ಏಳು ವರ್ಷಗಳ ಕಾಲ ಮಿದ್ಯಾನ್ಯರ ಕೈಗೆ ಒಪ್ಪಿಸಿದನು.

ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಲಿ” ಅಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದರಿಂದ ಅವರ ಬಳಿಯಲ್ಲಿ ಬಂಗಾರದ ಓಲೆಗಳು ಇದ್ದವು.

ಆತನು ಅವರ ಮುಂದಾಗಿ ಒಬ್ಬನನ್ನು ಕಳುಹಿಸಿದನು; ದಾಸತ್ವಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು.

ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ನೀರು ಸೇದಿಕೊಳ್ಳುವ ಹಾಗೆ ಬಾವಿಯಿಂದ ಮೇಲಕ್ಕೆ ಎತ್ತಿದರು; ಆ ಮೇಲೆ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.

“ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.

¶ “ಪೂರ್ವಿಕರು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,