TSK

TSK · ಆದಿಕಾಂಡ 37:8

مراجع Treasury of Scripture Knowledge في ಕನ್ನಡ IRV.

العودة إلى المقطع

ನಿನ್ನ ತಂದೆಯ ಆಶೀರ್ವಾದಗಳು ನಿನ್ನ ಪೂರ್ವಿಕರ ಆಶೀರ್ವಾದಕ್ಕಿಂತಲೂ ಮೀಗಿಲಾಗಿರುತ್ತದೆ. ಆದಿಯಿಂದಲೂ ಪರ್ವತಗಳಿಂದ ಉಂಟಾಗುವ ಎಲ್ಲಾ ಮೇಲುಗಳಿಗಿಂತಲೂ, ಸದಾಕಾಲ ಪ್ರಕೃತಿಯಿಂದ ಉಂಟಾಗುವ ಎಲ್ಲಾ ಸುಫಲಗಳು ಕೊನೆಯವರೆಗೂ ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಸಮೃದ್ಧಿಯಾಗಿ ದೊರೆಯುವುದು.

ಕೆಲವು ಮಂದಿ ಅಯೋಗ್ಯರು, “ಇವನು ನಮ್ಮನ್ನು ರಕ್ಷಿಸುವನೋ?” ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.

¶ ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹು ಅಸೂಯೆ ಉಂಟಾಗಿ ದಾವೀದನ ಮೇಲೆ ಕೋಪಗೊಂಡನು. ಅವನು “ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನೆಂದೂ, ನಾನು ಸಾವಿರಾರು ಶತ್ರುಗಳನ್ನು ಕೊಂದೆನೆಂದೂ ಹಾಡುತ್ತಾರಲ್ಲಾ, ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾಯಿತು” ಅಂದುಕೊಂಡು

ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ, ಮುಖ್ಯವಾದ ಮೂಲೆಗಲ್ಲಾಯಿತು;

¶ ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, ಹಾಗಾದರೆ ‹“‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ› ‹ಮುಖ್ಯವಾದ ಮೂಲೆಗಲ್ಲಾಯಿತು’› ‹ಎಂದು ಬರೆದಿರುವ ಮಾತೇನು?›

¶ “ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.