TSK

TSK · ಆದಿಕಾಂಡ 39:2

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆ ಕಾಲದಲ್ಲಿ ಅಬೀಮೆಲೆಕನು ತನ್ನ ಸೇನಾಧಿಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನೆ.

“ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡು ಬಂದುದರಿಂದ ನೀನೂ, ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು.

¶ ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.

ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.

ಸೇವಕರಲ್ಲೊಬ್ಬನು ಅವನಿಗೆ, “ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಕಿನ್ನರಿ ನುಡಿಸಬಲ್ಲವನೂ, ಪರಾಕ್ರಮಶಾಲಿಯೂ, ಯುದ್ಧ ನಿಪುಣನೂ, ವಾಕ್ಚತುರನೂ, ಸುಂದರನೂ, ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆ” ಎಂದು ತಿಳಿಸಿದನು.

ಮೀಕಲಳು ಅವನನ್ನು ಬಹಳವಾಗಿ ಪ್ರೀತಿಸುವವಳಾದಳು. ಯೆಹೋವನು ದಾವೀದನ ಸಂಗಡ ಇದ್ದಾನೆಂದು,

ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು.

ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.

ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.

ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.

ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.

“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”

ಅದಕ್ಕೆ ಅವನು, “ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?” ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು.

¶ ದಾಸತ್ವ ನೊಗದ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಪೂರ್ಣ ಗೌರವಕ್ಕೂ ಯೋಗ್ಯರೆಂದೆಣಿಸಲಿ, ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದನೆ ಉಂಟಾಗುತ್ತದೆ.