TSK

TSK · ಆದಿಕಾಂಡ 40:15

مراجع Treasury of Scripture Knowledge في ಕನ್ನಡ IRV.

العودة إلى المقطع

¶ ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.

¶ ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.

ಆಗ ಯೋಸೇಫನ ದಣಿಯು ಅವನನ್ನು ಹಿಡಿದು ಅರಸನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು.

¶ ಯಾರಾದರೂ ಒಬ್ಬ ಮನುಷ್ಯನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ ಅಥವಾ ಅವನು ಬಂಧಿಸಲ್ಪಟ್ಟಾಗ, ಅಪಹರಿಸಲ್ಪಟ್ಟವನು ಅವನೊಂದಿಗಿದ್ದರೆ ಅವನಿಗೆ ಮರಣಶಿಕ್ಷೆಯಾಗಬೇಕು.

ನನ್ನ ತಂದೆಯೇ, ಇಗೋ ನೋಡು, ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ. ನಾನು ನಿನ್ನನ್ನು ಕೊಲ್ಲದೆ, ನಿನ್ನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡೆನಷ್ಟೇ ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿಯಲ್ಲಾ.

ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಮುತ್ತಿಗೆ ಹಾಕಿ ನಿಂತಿದ್ದಾರೆ; ಎದ್ದು ಬಂದು ಪರಾಂಬರಿಸಿ ನನಗೆ ಸಹಾಯಮಾಡು.

ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.

‹‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.›

¶ “ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.

ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ.