TSK

TSK · ಆದಿಕಾಂಡ 40:22

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.

ನಮ್ಮಿಬ್ಬರಿಗೂ ಒಂದೇ ರಾತ್ರಿಯಲ್ಲಿ ಕನಸುಬಿತ್ತು. ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು.

¶ ಅದಕ್ಕೆ ಯೋಸೇಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ. ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನೂ ಕೊಡುವನು” ಎಂದು ಹೇಳಿದನು.

¶ ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ಪ್ರಕಟವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು,

ಹೌದು, ಬೇಲ್ತೆಶಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ಆ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು” ಎಂದಳು.