¶ ಅವನು ಇನ್ನೊಂದು ಕನಸನ್ನು ಕಂಡನು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ, “ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯಚಂದ್ರರೂ, ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡ ಬಿದ್ದವು” ಎಂದು ಹೇಳಿದನು.
TSK
TSK · ಆದಿಕಾಂಡ 41:32
مراجع Treasury of Scripture Knowledge في ಕನ್ನಡ IRV.
ದೇವರು ಮಾತನಾಡುವ ರೀತಿ ಒಂದುಂಟು ಹೌದು, ಎರಡೂ ಉಂಟು, ಮನುಷ್ಯನಾದರೋ ಲಕ್ಷಿಸುವುದಿಲ್ಲ.
ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.
‹ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.›
‹ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.›
ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”
ಆಗ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು.