ಯೋಸೇಫನು ಅವರನ್ನು ಕಂಡಾಗ ಅವರ ಗುರುತು ಹಿಡಿದು ತನ್ನ ಅಣ್ಣಂದಿರೆಂದು ತಿಳಿದರೂ ಅವರಿಗೆ ಅನ್ಯನಂತೆ ತೋರ್ಪಡಿಸಿಕೊಂಡು ಕಠಿಣ ನುಡಿಯಿಂದ, “ನೀವು ಎಲ್ಲಿಂದ ಬಂದವರು” ಎಂದು ಕೇಳಿದನು. ಅವರು, “ಧಾನ್ಯವನ್ನು ಕೊಂಡುಕೊಳ್ಳುವುದಕ್ಕೊಸ್ಕರ ಕಾನಾನ್ ದೇಶದಿಂದ ಬಂದಿದ್ದೇವೆ” ಎಂದರು.
TSK
TSK · ಆದಿಕಾಂಡ 42:15
مراجع Treasury of Scripture Knowledge في ಕನ್ನಡ IRV.
ಅವನನ್ನು ಕರೆದುಕೊಂಡು ಬರುವುದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ. ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇಡುತ್ತೇನೆ. ಹೀಗೆ ನಾನು ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಅಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ ಫರೋಹನ ಜೀವದಾಣೆ ನೀವು ಗೂಢಚಾರರೇ” ಎಂದು ಹೇಳಿದನು.
ಆ ದೇಶಾಧಿಪತಿ ನಮ್ಮ ಸಂಗಡ ಕಟುವಾಗಿ ಮಾತನಾಡಿ ನಮ್ಮನ್ನು ಗೂಢಚಾರರೆಂದು ಭಾವಿಸಿದನು.
¶ ಅದಕ್ಕೆ ಯೆಹೂದನು ತನ್ನ ತಂದೆಗೆ ಹೇಳಿದ್ದೇನಂದರೆ, “ಆ ಮನುಷ್ಯನು ನಮಗೆ ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ಮುಖವನ್ನು ನೋಡಬಾರದು’ ಎಂದು ಖಂಡಿತವಾಗಿ” ಹೇಳಿದ್ದಾನೆ.
ನಾವು ‘ನಮಗೆ ಮುದುಕನಾದ ತಂದೆಯಿದ್ದಾನೆ, ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಮಗನೂ ಇದ್ದಾನೆ, ಅವನ ಒಡಹುಟ್ಟಿದವನು ಸತ್ತು ಹೋಗಿದ್ದಾನೆ. ಆದುದರಿಂದ ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು’ ಎಂದು ಹೇಳಿದೆವು.
ಅದಕ್ಕೆ ನೀವು, ‘ನಿಮ್ಮ ತಮ್ಮನು ನಿಮ್ಮ ಸಂಗಡ ಬಾರದಿದ್ದರೆ ನೀವು ಇನ್ನೊಂದು ಸಾರಿ ನನ್ನ ಮುಖವನ್ನು ನೋಡಬಾರದು’ ಎಂದು ಅಪ್ಪಣೆಕೊಟ್ಟಿರಿ.
ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.
¶ ದಾವೀದನು ಫಿಲಿಷ್ಟಿಯರೊಡನೆ ಯುದ್ಧಮಾಡುವುದಕ್ಕೆ ಹೊರಟದ್ದನ್ನು ಸೌಲನು ಕಂಡು ತನ್ನ ಸೇನಾಪತಿಯಾದ ಅಬ್ನೇರನನ್ನು, “ಅಬ್ನೇರನೇ ಈ ಹುಡುಗನು ಯಾರ ಮಗನು?” ಎಂದು ಕೇಳಿದ್ದಕ್ಕೆ ಅವನು ಸೌಲನಿಗೆ, “ಅರಸನೇ ನಿನ್ನ ಜೀವದಾಣೆ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟನು.
ಜನರು, “ಯೆಹೋವನ ಜೀವದಾಣೆ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ.
¶ ‹“ಮತ್ತು, ನೀನು ಸುಳ್ಳಾಣೆಯಿಡಬಾರದು;›‹‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ.›
¶ ಮುಖ್ಯವಾಗಿ ನನ್ನ ಸಹೋದರರೇ, ಆಣೆಯಿಡಲೇ ಬೇಡಿರಿ. ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ಯಾವುದರ ಮೇಲಾಗಲಿ ಆಣೆಯಿಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.