ಇನ್ನೂರು ಆಡುಕುರಿ, ಇಪ್ಪತ್ತು ಹೋತ, ಇಪ್ಪತ್ತು ಟಗರು, ಮರಿಯೊಡನೆ ಹಾಲು ಕರೆಯುವ
TSK
TSK · ಆದಿಕಾಂಡ 43:11
مراجع Treasury of Scripture Knowledge في ಕನ್ನಡ IRV.
¶ ಯಾಕೋಬನು, “ಹಾಗಲ್ಲ, ನಿನಗೆ ನನ್ನ ಮೇಲೆ ದಯೆಯಿದ್ದರೆ, ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು, ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ ಸಂಗತಿಯಾಗಿದೆ.
ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು.
ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.
ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು?” ಎನ್ನಲು
ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.
ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಕ್ಕೆ ಬೇಕಾದ ಆಯುಧಗಳು, ಸುಗಂಧದ್ರವ್ಯ, ಕುದುರೆ ಮತ್ತು ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.
ಅರಸನು ಹಜಾಯೇಲನಿಗೆ, “ನೀನು ಕಾಣಿಕೆಯನ್ನು ತೆಗೆದುಕೊಂಡು ದೇವರ ಮನುಷ್ಯನ ಬಳಿಗೆ ಹೋಗಿ ನನಗೆ ವಾಸಿಯಾಗುವುದೋ? ಇಲ್ಲವೋ ಎಂಬುದನ್ನು ಅವನ ಮುಖಾಂತರವಾಗಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸು” ಎಂದು ಆಜ್ಞಾಪಿಸಿದನು.
¶ ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬೆಲಿನ ಅರಸನೂ ಆದ ಬೆರೋದಕಬಲದಾನ ಎಂಬುವವನು ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿ, ದೂತರ ಮುಖಾಂತರವಾಗಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.
ಅರಸುಗಳು ಯೆರೂಸಲೇಮ್ ಪಟ್ಟಣಕ್ಕೆ ನಿನಗೋಸ್ಕರ ಕಾಣಿಕೆಗಳನ್ನು ತಂದು ಸಮರ್ಪಿಸಲಿ.
ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.
ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.
ಗುಪ್ತ ಬಹುಮಾನವು ಕೋಪವನ್ನಾರಿಸುವುದು, ಮಡಲಲ್ಲಿಟ್ಟ ಲಂಚವು ಕ್ರೋಧವನ್ನು ಅಣಗಿಸುವುದು.
ಜಟಮಾಂಸಿ, ಕುಂಕುಮ, ಬಜೆ, ಲವಂಗಚಕ್ಕೆ, ಸಮಸ್ತ ವಿಧವಾದ ಸಾಂಬ್ರಾಣಿ ಗಿಡಗಳು, ರಕ್ತಬೋಳ, ಅಗುರು, ಸಕಲ ಮುಖ್ಯ ಸುಗಂಧದ್ರವ್ಯ ಇವುಗಳೇ ಚಿಗುರುತ್ತವೆ.
ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?
¶ “ಯೆಹೂದ್ಯರೂ, ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋದಿಯಿಂದಲೂ, ಖಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧತೈಲದಿಂದಲೂ ನಿನ್ನೊಂದಿಗೆ ವ್ಯಾಪಾರ ನಡೆಸಿದರು.