TSK

TSK · ಆದಿಕಾಂಡ 44:21

مراجع Treasury of Scripture Knowledge في ಕನ್ನಡ IRV.

العودة إلى المقطع

ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವುದರಿಂದ ನೀವು ಸಾಯುವುದಿಲ್ಲ” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿದರು.

ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರುಗಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವುದಿಲ್ಲ.

ಅವರು ತಮ್ಮ ಶತ್ರುಗಳ ವಶವಾಗಿ ಸೆರೆಗೆ ಹೋದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವುದು. ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.”