ಆದಿಕಾಂಡ 44:17
TSK
¶ ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಿರಲಿ. ನೀವಾದರೋ ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ” ಎಂದನು.
TSK
مراجع Treasury of Scripture Knowledge في ಕನ್ನಡ IRV.
¶ ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಿರಲಿ. ನೀವಾದರೋ ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ” ಎಂದನು.
ಈ ಹುಡುಗನು ನಮ್ಮ ಸಂಗಡ ಇಲ್ಲದೆ ಇರುವುದನ್ನು ತಿಳಿದ ಕೂಡಲೇ ನಮ್ಮ ತಂದೆಯು ಸಾಯುವನು. ತಮ್ಮ ಸೇವಕರಾದ ನಾವು ನಮ್ಮ ಮುಪ್ಪಾದ ತಂದೆ ದುಃಖದಿಂದಲೇ ಸಮಾಧಿಗೆ ಸೇರಲು ಕಾರಣರಾಗುವೆವು.
¶ ದಾವೀದನು ಸೌಲನೊಡನೆ ಮಾತನಾಡಿ ಮುಗಿಸಿದ ಮೇಲೆ ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಅವನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.
ಇದನ್ನು ಕೇಳಿ ಅರಸನು ಎದೆಯೊಡದವನಾಗಿ, “ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!” ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು.