TSK

TSK · ಆದಿಕಾಂಡ 45:8

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಫರೋಹನು ಯೋಸೇಫನಿಗೆ, “ನೋಡು ಐಗುಪ್ತ ದೇಶದ ಮೇಲೆಲ್ಲಾ ನಿನ್ನನ್ನು ಅಧಿಕಾರಿಯನ್ನಾಗಿ ನೇಮಿಸಿದ್ದೇನೆ” ಎಂದು ಹೇಳಿ,

ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.

ಮೀಕನು ಅವನಿಗೆ, “ನೀನು ನಮ್ಮಲ್ಲಿರು; ನಮಗೆ ತಂದೆಯೂ, ಯಾಜಕನೂ ಆಗು. ನಿನಗೆ ವರ್ಷಕ್ಕೆ ಹತ್ತು ಬೆಳ್ಳಿ ನಾಣ್ಯಗಳನ್ನೂ, ಬಟ್ಟೆಯನ್ನೂ, ಆಹಾರವನ್ನೂ ಕೊಡುತ್ತೇನೆ” ಅನ್ನಲು

ಅವನನ್ನು ತನ್ನ ಮನೆಗೆ ಯಜಮಾನನನ್ನಾಗಿಯೂ, ತನ್ನ ಆಸ್ತಿಗೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದನು.

‹ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.›

ಆದ್ದರಿಂದ ದೇವರ ದಯೆಯು ಮನುಷ್ಯರಿಗೆ ಅಪೇಕ್ಷಿಸುವುದರಿಂದಾಗಲಿ, ಪ್ರಯತ್ನಿಸುವುದರಿಂದಾಗಲಿ ದೊರೆಯದೆ ದೇವರು ಕರುಣಿಸುವುದರಿಂದಲೇ ದೊರೆಯುತ್ತದೆ.