TSK

TSK · ಆದಿಕಾಂಡ 46:20

مراجع Treasury of Scripture Knowledge في ಕನ್ನಡ IRV.

العودة إلى المقطع

ಇದಲ್ಲದೆ ಫರೋಹನು ಯೋಸೇಫನಿಗೆ “ಸಾಫ್ನತ್ಪನ್ನೇಹ” ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು.

¶ ಕೆಲವು ಕಾಲವಾದ ಮೇಲೆ ಯೋಸೇಫನಿಗೆ, “ಅವನ ತಂದೆಯು ಅಸ್ವಸ್ಥನಾಗಿದ್ದಾನೆ” ಎಂಬ ವಾರ್ತೆಯು ದೊರಕಿತು. ಆಗ ಯೋಸೇಫನು ಮನಸ್ಸೆ ಎಫ್ರಾಯೀಮರೆಂಬ ತನ್ನಿಬ್ಬರು ಮಕ್ಕಳನ್ನು ತನ್ನ ಸಂಗಡ ಕರೆದುಕೊಂಡು ತಂದೆಯ ಬಳಿಗೆ ಬಂದನು.

ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯೀಮನನ್ನೂ, ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ, ಅವರಿಬ್ಬರನ್ನೂ ತನ್ನ ತಂದೆಯ ಬಳಿ ನಿಲ್ಲಿಸಿದನು.

¶ ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.

¶ ಯೋಸೇಫ್ ಕುಲಗಳ ವಿಷಯದಲ್ಲಿ, “ಅವರ ಸೀಮೆಗೆ ಯೆಹೋವನ ಆಶೀರ್ವಾದವಾಗಲಿ. ಮೇಲಣ ಆಕಾಶದಿಂದುಂಟಾಗುವ ಮಂಜು, ಕೆಳಗಣ ಸಾಗರದ ಸೆಲೆ,

¶ ಮನಸ್ಸೆಯ ಸಂತಾನದವರು: ಅರಾಮ್ಯಳಾದ ಮನಸ್ಸೆಯ ಉಪಪತ್ನಿಯಿಂದ ಅಷ್ರೀಯೇಲ ಮತ್ತು ಮಾಕೀರನನ್ನು ಮನಸ್ಸೆ ಪಡೆದನು. ಮಾಕೀರನು ಗಿಲ್ಯಾದನ ತಂದೆ.