TSK

TSK · ಆದಿಕಾಂಡ 46:34

مراجع Treasury of Scripture Knowledge في ಕನ್ನಡ IRV.

العودة إلى المقطع

ಅದೇ ದಿನ ಲಾಬಾನನು ಆಡುಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ, ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ, ಅಂದರೆ ಸ್ವಲ್ಪ ಬಿಳುಪಾದ ಬಣ್ಣವು ತೋರಿದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿದ್ದುವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿಕೊಟ್ಟನು.

¶ ಅವನ ಅಣ್ಣಂದಿರು ತಂದೆಯ ಆಡುಕುರಿ ಹಿಂಡುಗಳನ್ನು ಮೇಯಿಸುವುದಕ್ಕೆ ಶೆಕೆಮಿಗೆ ಹೋದರು.

ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು. ನೀನೂ, ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ಕುರಿದನಗಳೂ ಮೊದಲಾದ ಎಲ್ಲವೂ ನನ್ನ ಬಳಿಯಲ್ಲೇ ಇರಬೇಕು.

ಆದರೆ ಆ ದಿನದಲ್ಲಿ ನಾನೇ, ಭೂಲೋಕದಲ್ಲಿ ಯೆಹೋವನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ಪ್ರತ್ಯೇಕಿಸುವೆನು. ಅಲ್ಲಿ ಆ ನೊಣಗಳ ಕಾಟವು ಇರುವುದಿಲ್ಲ.