TSK

TSK · ಆದಿಕಾಂಡ 47:26

مراجع Treasury of Scripture Knowledge في ಕನ್ನಡ IRV.

العودة إلى المقطع

ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ” ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು.

ಫರೋಹನು ಐಗುಪ್ತ ದೇಶದ ಎಲ್ಲಾ ಭಾಗಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿ ಅವರ ಕೈಯಿಂದ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯೊಳಗೆ ಐದರಲ್ಲಿ ಒಂದು ಪಾಲನ್ನು ಕಂದಾಯವಾಗಿ ಎತ್ತಿಸಬೇಕು.

¶ “‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.

ಇದಲ್ಲದೆ ಆ ದೇವಾಲಯದ ಸೇವೆಯಲ್ಲಿರುವ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದಾಸರು ಮುಂತಾದ ಸೇವಕರಲ್ಲಿ ಯಾರಿಂದಲೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.’