TSK

TSK · ಆದಿಕಾಂಡ 47:6

مراجع Treasury of Scripture Knowledge في ಕನ್ನಡ IRV.

العودة إلى المقطع

“ಇಗೋ, ಇದು ನನ್ನ ದೇಶ; ಇದರೊಳಗೆ ನಿನಗೆ ಇಷ್ಟವಿದ್ದ ಕಡೆಯಲ್ಲಿ ನೀನು ವಾಸ ಮಾಡಬಹುದು” ಎಂದು ಅಬೀಮೆಲೆಕನು ಹೇಳಿದನು.

ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು. ನೀನೂ, ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ಕುರಿದನಗಳೂ ಮೊದಲಾದ ಎಲ್ಲವೂ ನನ್ನ ಬಳಿಯಲ್ಲೇ ಇರಬೇಕು.

ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಐಗುಪ್ತ ದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮದೇ’” ಎಂದು ಹೇಳಿದನು.

¶ ಫರೋಹನ ಅಪ್ಪಣೆಯ ಮೇರೆಗೆ ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಐಗುಪ್ತ ದೇಶದಲ್ಲಿ ವಾಸಮಾಡಲು ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸ್ವತ್ತು ಕೊಟ್ಟನು.

ಯೆಹೋವನು ಅಡವಿಯಲ್ಲಿರುವ ನಿನ್ನ ಎಲ್ಲಾ ಪಶುಗಳಿಗೂ, ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲವುಗಳಿಗೂ ವಿರೋಧವಾಗಿ ತನ್ನ ಕೈಯನ್ನು ಎತ್ತಿ ಘೋರವ್ಯಾಧಿಯನ್ನು ಉಂಟುಮಾಡುವನೆಂದು ತಿಳಿದುಕೋ.

ಯಾರು ಯೆಹೋವನ ಮಾತನ್ನು ಮನಸ್ಸಿಗೆ ತೆಗೆದುಕೊಳ್ಳಲಿಲ್ಲವೋ, ಅವರು ತಮ್ಮ ಆಳುಗಳನ್ನೂ, ಪಶುಗಳನ್ನೂ ಹೊಲದಲ್ಲಿಯೇ ಬಿಟ್ಟರು.

ಮೋಶೆಯು ಇಸ್ರಾಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.

ಶಾರೋನಿನಲ್ಲಿ ಮೇಯುವ ಹಸುಗಳ ಮೇಲೆ ಶಾರೋನ್ಯನಾದ ಶಿಟ್ರೈ, ತಗ್ಗುಗಳಲ್ಲಿ ಮೇಯುವ ಹಸುಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು,

ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.

ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.