TSK

TSK · ಆದಿಕಾಂಡ 47:7

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ;

ಪುನಃ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.

“ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಹೀಗೆ ಆಶೀರ್ವದಿಸಬೇಕು. ಈ ಪ್ರಕಾರ ಅವರಿಗೆ ಹೇಳಬೇಕು,

ಏಲಿಯು ಎಲ್ಕಾನನಿಗೆ, “ನೀನು ಯೆಹೋವನಿಗೆ ಒಪ್ಪಿಸಿಬಿಟ್ಟ ಮಗನಿಗೆ ಬದಲಾಗಿ ಆತನು ಈ ಸ್ತ್ರೀಯಿಂದ ನಿನಗೆ ಬೇರೆ ಮಕ್ಕಳನ್ನು ಕೊಡಲಿ” ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದರು.

¶ ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ, ಅರಸನನ್ನು ಹರಸಿ, “ಅರಸನೇ ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂದು ಈಗ ಗೊತ್ತಾಯಿತು” ಎಂದು ಹೇಳಿದನು.

ಅರಸನಾದ ದಾವೀದನ ಸೇವಕರು ನಮ್ಮ ಒಡೆಯನೂ, ಅರಸನೂ ಆದ ದಾವೀದನ ಮುಂದೆ ಬಂದು, ‘ನಿನ್ನ ದೇವರು ನಿನ್ನ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ. ರಾಜ್ಯವನ್ನು ನಿನ್ನ ಕಾಲದಲ್ಲಿ ಇದ್ದದ್ದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಬಲಪಡಿಸಲಿ’ ಎಂದು ಅವನನ್ನು ಹರಿಸಿದ್ದಾರೆ.

ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, ‹“ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ”› ಅಂದನು.

ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.