¶ ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.
TSK
TSK · ಆದಿಕಾಂಡ 49:25
مراجع Treasury of Scripture Knowledge في ಕನ್ನಡ IRV.
ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.
ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ” ಎಂದು ಹೇಳಿದನು.
¶ ಅದಕ್ಕೆ ಅವನು, “ನೀವು ಸಮಾಧಾನವಾಗಿರಿ. ನೀವೇನೂ ಭಯಪಡಬೇಡಿರಿ ನಿಮಗೂ ನಿಮ್ಮ ತಂದೆಗೂ ದೇವರಾಗಿರುವಾತನು ನಿಮ್ಮ ಚೀಲಗಳಲ್ಲಿ ಹಣವನ್ನು ಇಟ್ಟಿರಬೇಕು. ನಿಮ್ಮ ಹಣವು ನನಗೆ ಮುಟ್ಟಿತು” ಎಂದು ಹೇಳಿ, ಅವನು ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.
ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಡೆದರೆ ಈ ಶುಭಗಳೆಲ್ಲಾ ನಿಮಗೆ ಪ್ರಾಪ್ತವಾಗುವವು. ಅವು ಯಾವುವೆಂದರೆ:
¶ ಯೋಸೇಫ್ ಕುಲಗಳ ವಿಷಯದಲ್ಲಿ, “ಅವರ ಸೀಮೆಗೆ ಯೆಹೋವನ ಆಶೀರ್ವಾದವಾಗಲಿ. ಮೇಲಣ ಆಕಾಶದಿಂದುಂಟಾಗುವ ಮಂಜು, ಕೆಳಗಣ ಸಾಗರದ ಸೆಲೆ,
ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು.
ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹೊಗಳಿಕೊಳ್ಳದಿರಲಿ. ಯಾಕೆಂದರೆ ಸಮಸ್ತವೂ ನಿಮಗಾಗಿಯೇ ಇದೆ.
ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.