¶ ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.
TSK
TSK · ಆದಿಕಾಂಡ 49:3
مراجع Treasury of Scripture Knowledge في ಕನ್ನಡ IRV.
¶ ಐಗುಪ್ತ ದೇಶಕ್ಕೆ ಬಂದು ಸೇರಿದ ಇಸ್ರಾಯೇಲನ ಮಕ್ಕಳ ಹೆಸರುಗಳು: ಯಾಕೋಬನು ಮತ್ತು ಅವನ ಚೊಚ್ಚಲ ಮಗನಾದ ರೂಬೇನನು.
¶ ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು.
ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಮತ್ತು ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲಾ.
¶ “ರೂಬೇನ್ ಕುಲದ ವಿಷಯದಲ್ಲಿ, ‘ರೂಬೇನ್ ಕುಲವು ನಾಶವಾಗದೆ ಉಳಿಯಲಿ; ಆದರೆ ಅದು ಸ್ವಲ್ಪ ಜನರುಳ್ಳದ್ದಾಗಿರುವುದು’ ಎಂದು ಹೇಳಿದನು.
¶ ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲ ಮಗನಾಗಿದ್ದರೂ ಅವನು ತನ್ನ ತಂದೆಯ ಉಪಪತ್ನಿಯೊಂದಿಗೆ ಸಂಗಮಿಸಿ ಹಾಸಿಗೆಯನ್ನು ಹೊಲೆ ಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.
ಹಾಮನ ವಂಶದವರ ಪ್ರಥಮಫಲವಾಗಿರುವ ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು.
¶ ಎಫ್ರಾಯೀಮಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ರೂಬೇನಿಗೆ ಒಂದು ಪಾಲು.