TSK

TSK · ಆದಿಕಾಂಡ 49:9

مراجع Treasury of Scripture Knowledge في ಕನ್ನಡ IRV.

العودة إلى المقطع

ಇಗೋ, ಜನಾಂಗದವರು ಎದ್ದು ಪ್ರಾಯದ ಸಿಂಹದಂತೆ ನಿಂತಿದ್ದಾರೆ; ಸಿಂಹವು ಮೃಗವನ್ನು ಕೊಂದು ಮಾಂಸವನ್ನು ತಿಂದು ತೃಪ್ತಿಹೊಂದದ ಹೊರತು ಮಲಗುವುದಿಲ್ಲ ತಾನು ಬೇಟೆಯಾಡಿದ ರಕ್ತವನ್ನು ಕುಡಿದು ಮಲಗುವುದು.”

ಆರು ಮೆಟ್ಟಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.

ಆ ಸಿಂಹಿಣಿಯು ತಾನು ಕಾದುಕೊಂಡಿದ್ದರೂ, ತನ್ನ ನಿರೀಕ್ಷೆಯು ಹಾಳಾಯಿತೆಂದು ತನ್ನ ಮರಿಗಳಲ್ಲಿ ಇನ್ನೊಂದನ್ನು ತೆಗೆದು ಸಾಕಿ, ಪ್ರಾಯಕ್ಕೆ ತಂದಳು.

ನಾನು ಎಫ್ರಾಯೀಮಿಗೆ ಸಿಂಹವೂ, ಯೆಹೂದ ಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಯಾರೂ ಬಿಡಿಸರು.

ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು.