TSK

TSK · ಆದಿಕಾಂಡ 5:24

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು ತನ್ನ ತಮ್ಮಂದಿರ ಬಳಿಗೆ ಬಂದು, “ಅಯ್ಯೋ, ಹುಡುಗನು ಇಲ್ಲವಲ್ಲಾ, ನಾನೆಲ್ಲಿಗೆ ಹೋಗಲಿ?” ಎಂದು ಗೋಳಾಡಿದನು.

¶ ಯೆಹೋವನು ಎಲೀಯನನ್ನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಸೇರಿಸಿಕೊಳ್ಳುವ ಸಮಯ ಬಂದಾಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.

ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥಾರಥಾಶ್ವಗಳಾಗಿದ್ದವನೇ” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದ ಮೇಲೆ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.

“ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಆಕ್ರಂದನವೂ ಬಹು ಗೋಳಾಟವೂ ಉಂಟಾದವು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಗೋಳಾಡಿ ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದಲಾರದೆ ಇದ್ದಳು” ಎಂಬುದೇ.

¶ ನಂಬಿಕೆಯಿಂದಲೇ ಹನೋಕನು ಮರಣವನ್ನು ಅನುಭವಿಸದೇ ಒಯ್ಯಲ್ಪಟ್ಟನು. ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಯಾರಿಗೂ ಕಾಣಿಸಿಗಲಿಲ್ಲ. ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಹೊಂದಿದನು.