TSK

TSK · ಆದಿಕಾಂಡ 50:5

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.

¶ ಇಸ್ರಾಯೇಲನು, “ಪ್ರಮಾಣಮಾಡು” ಎನ್ನಲು ಅವನು ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ತನ್ನ ಊರುಕೋಲಿನ ಮೇಲೆ ಬಾಗಿ ದೇವರಿಗೆ ನಮಸ್ಕಾರ ಮಾಡಿದನು.

¶ ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, “ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು.

ಇಲ್ಲಿಯೇ ಸಾಯಬೇಕೆಂದು ಖಂಡಿತವಾಗಿ ಹೇಳಿದನು. ನೀವಾದರೋ ನದಿದಾಟಿ ಆ ಒಳ್ಳೆಯ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.

ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು.

ಯೆರೂಸಲೇಮಿನ ಸುತ್ತಲೂ ಅವರ ರಕ್ತವನ್ನು ನೀರಿನ ಹಾಗೆ ಚೆಲ್ಲಿದರು; ಅವರನ್ನು ಹೂಣಿಡುವವರು ಯಾರೂ ಇರಲಿಲ್ಲ.

ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, ಗೋಳಾಟದವರು ಬೀದಿಯಲ್ಲಿ ತಿರುಗುವರು.

‘ಇಲ್ಲಿ ನಿನಗೇನು ಕೆಲಸ? ಇಲ್ಲಿ ನಿನಗಾಗಿ ಸಮಾಧಿಯನ್ನು ತೋಡಿಸಿಕೊಂಡಿರುವ ನೀನು ಯಾರು? ಉನ್ನತದಲ್ಲಿ ನಿನಗೆ ಸಮಾಧಿಯನ್ನು ಕೊರೆಸುತ್ತಾ, ಬಂಡೆಯನ್ನು ಕೆತ್ತಿಸಿ, ನಿನಗಾಗಿ ವಿಶ್ರಾಂತಿಯ ಸ್ಥಳವನ್ನು ತೋಡಿಸಿದಿ ಅಲ್ಲವೇ?’”

ಬಂಡೆಯಲ್ಲಿ ತೋಡಿದ್ದ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.