TSK

TSK · ಆದಿಕಾಂಡ 6:12

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.

¶ ಆಗ ಯೆಹೋವನು ನೋಹನಿಗೆ, “ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ.

¶ ದೇವರು ಪುನಃ ಹೇಳಿದ್ದೇನಂದರೆ, “ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು.

¶ ಇದಲ್ಲದೆ ಯೆಹೋವನು, “ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು,

ಕೆಟ್ಟವರು ಮೊದಲಿನಿಂದಲೂ, ನಡೆದ ದಾರಿಯನ್ನು ನೀನು ಹಿಡಿಯುವಿಯಾ?

ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.

ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಪ್ರತಿಯೊಬ್ಬನೂ ದಾರಿತಪ್ಪಿದವನು, ಎಲ್ಲರೂ ಕೆಟ್ಟು ಹೋದವರೇ.

ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,

ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.