TSK

TSK · ಆದಿಕಾಂಡ 7:11

مراجع Treasury of Scripture Knowledge في ಕನ್ನಡ IRV.

العودة إلى المقطع

ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು.

ಭೂಮಿಯ ಅಡಿಯಲ್ಲಿದ್ದ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಕೊಂಡವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತು ಹೋಯಿತು. ಭೂಮಿಯ ಮೇಲಿದ್ದ ನೀರು ಕ್ರಮೇಣವಾಗಿ ತಗ್ಗುತ್ತಾ ಬಂತು.

ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು.

ಗಣಿಯನ್ನು ತೋಡಿ ತೋಡಿ ಭೂಮಿಯೊಳಗೆ ಬಹುದೂರ ಜನರು ವಾಸಸ್ಥಳಗಳಿಂದ ದೂರವಾಗುವರು, ಭೂಮಿಯ ಮೇಲೆ ನಡೆದಾಡುವವರಿಗೆ ಕಾಣದೆ, ನರಲೋಕಕ್ಕೆ ಅನ್ಯರಾಗಿ ಅತ್ತಿತ್ತ ಅಲೆದಾಡುವರು.

ಜ್ಞಾನದಿಂದ ಯಾರು ಮೇಘಗಳನ್ನು ಲೆಕ್ಕಿಸುವರು? ಆಕಾಶದಲ್ಲಿನ ಬುದ್ದಲಿಗಳನ್ನು ಮೊಗಚಿಹಾಕಿ,

ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.

ಆತನು ಗಗನವನ್ನು ಮೇಲೆ ಸ್ಥಿರಪಡಿಸಿ, ಸಾಗರದ ಬುಗ್ಗೆಗಳನ್ನು ನೆಲೆಗೊಳಿಸಿದನು.

ಭೂಮಿಯು ಒಡೆದೇ ಇದೆ, ಬಿರಿದಿದೆ, ಕದಲಿಯೇ ಹೋಗಿದೆ.

ಆತನ ಗರ್ಜನೆಗೆ ಆಕಾಶದಿಂದ ನೀರು ಬೋರ್ಗರೆದು ಸುರಿಯುತ್ತದೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.

ಸೇನಾಧೀಶ್ವರನಾದ ಯೆಹೋವನು ಭೂಮಿಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುತ್ತದೆ; ಸಕಲ ನಿವಾಸಿಗಳು ಗೋಳಾಡುತ್ತಾರೆ; ನೆಲವೆಲ್ಲಾ ನೈಲ್ ನದಿಯಂತೆ ಉಬ್ಬಿ, ಐಗುಪ್ತದ ನದಿಯ ಹಾಗೆಯೇ ಇಳಿದು ಹೋಗುತ್ತದೆ.

‹ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು.›