¶ ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು.
TSK
TSK · ಆದಿಕಾಂಡ 7:13
مراجع Treasury of Scripture Knowledge في ಕನ್ನಡ IRV.
¶ “ಆದರೆ ನಿನ್ನೊಂದಿಗೆ ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ನೀನೂ ನಿನ್ನ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಬೇಕು.
ಆಗ ನೋಹನು ಪ್ರಳಯದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಿದನು.
¶ ನಾವೆಯಿಂದ ಹೊರಟುಬಂದ ನೋಹನ ಮಕ್ಕಳು ಯಾರೆಂದರೆ ಶೇಮ್, ಹಾಮ್, ಯೆಫೆತ್. ಹಾಮನು ಕಾನಾನನ ತಂದೆಯು.
¶ ಹಾಮನ ಸಂತಾನದವರು ಯಾರೆಂದರೆ - ಕೂಷ್, ಮಿಚ್ರಯಿಮ್, ಪೂತ್, ಕಾನಾನ್ ಎಂಬುವವರು.
ಅವರ ತಂದೆಗಳೂ, ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ, ‘ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವುದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದ್ದರಿಂದ ನೀವು ನಿರಪರಾಧಿಗಳು’ ಎಂದು ಹೇಳಿ ಸಮಾಧಾನಪಡಿಸುವೆವು” ಅಂದರು.
¶ ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.
ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.