TSK

TSK · ಆದಿಕಾಂಡ 7:16

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ನೋಹನು ಮಾಡಿದನು.

ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;

ಇಗೋ, ಯಾರೂ ಕಟ್ಟದ ಹಾಗೆ ಕೆಡವಿಬಿಡುವನು, ಯಾರೂ ಬಿಡಿಸದಂತೆ ಸೆರೆಹಾಕುವನು.

ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.

‹ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು.›

‹ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.›