TSK

TSK · ಆದಿಕಾಂಡ 8:16

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ಯೆಹೋವನು ನೋಹನಿಗೆ, “ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ.

¶ ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳು, ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು.

ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಯೆಹೋವನ ಅಪ್ಪಣೆಗಳನ್ನೆಲ್ಲಾ ಅವರು ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲೇ ನಿಂತರು.

ಆಗ ಯೆಹೋಶುವನು ಆ ಯಾಜಕರಿಗೆ ಯೊರ್ದನ್ ನದಿಯಿಂದ ಹೊರಕ್ಕೆ ಬರಬೇಕೆಂದು ಆಜ್ಞಾಪಿಸಿದನು.

ನೀನು ಹೋಗುವಾಗಲೂ, ಬರುವಾಗಲೂ, ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.

¶ ನನ್ನ ಜನರೇ, ನೀವು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.

ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.