TSK

TSK · ಆದಿಕಾಂಡ 9:15

مراجع Treasury of Scripture Knowledge في ಕನ್ನಡ IRV.

العودة إلى المقطع

ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ.

ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು.

“ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು.

ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.

ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.

ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.