TSK

TSK · ಹಗ್ಗಾಯ 1:4

مراجع Treasury of Scripture Knowledge في ಕನ್ನಡ IRV.

العودة إلى المقطع

ಐದನೆಯ ವರ್ಷದಲ್ಲಿ ಅದರಿಂದ ಉಂಟಾಗುವ ಆದಾಯವು ನಿಮ್ಮದೇ ಆಗಿರುವುದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.

¶ ಆಗ ಎಲೀಷನು ಗೇಹಜಿಗೆ, “ಒಬ್ಬನು ರಥದಿಂದ ಇಳಿದು ಬಂದು, ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಲಿಲ್ಲವೆಂದು ತಿಳಿದಿರುವೆಯಾ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷಿತೋಟಗಳು, ಕುರಿದನಗಳು, ದಾಸದಾಸಿಯರು, ಜನರೂ ಇವುಗಳನ್ನು ಸಂಪಾದಿಸುವುದಕ್ಕೆ ಇದು ಸಮಯವೋ?

ಅದು ಕಲ್ಲುಕುಪ್ಪೆಯಾಗಿ ಹೋಗಿದ್ದರೂ, ಅದು ನಿನ್ನ ಸೇವಕರಿಗೆ ಅತಿಪ್ರಿಯವಾಗಿದೆ; ಅದರ ಧೂಳಿಗೆ ಅವರು ಮರಗುತ್ತಾರೆ.

ಕೊಲ್ಲುವ ಸಮಯ, ಸ್ವಸ್ಥಮಾಡುವ ಸಮಯ ಕೆಡುವಿಬಿಡುವ ಸಮಯ, ಕಟ್ಟುವ ಸಮಯ,

“ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಜನ, ಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತ್ಯವೂ, ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವುದಕ್ಕೆ ಪುನಃ ಆಸರೆಯಾಗುವವು.

ಕರ್ತನು ತನ್ನ ಯಜ್ಞವೇದಿಯನ್ನು ತಿರಸ್ಕರಿಸಿ, ತನ್ನ ಪವಿತ್ರಾಲಯಕ್ಕೆ ಅಸಹ್ಯಪಟ್ಟು, ಚೀಯೋನಿನ ಅರಮನೆಗಳ ಗೋಡೆಗಳನ್ನು ಶತ್ರು ವಶಮಾಡಿದ್ದಾನೆ; ಉತ್ಸವದಿನದಲ್ಲಿ ಘೋಷಿಸುವಂತೆ ಶತ್ರುಗಳು ಯೆಹೋವನ ಮಂದಿರದಲ್ಲಿ ಜಯಘೋಷವೆತ್ತಿದ್ದಾರೆ.

ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ

ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.

ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು; ಯಾಕೆಂದರೆ ನಾನು ಅದನ್ನು ಫಲಿಸಲು ಬಿಡಲಿಲ್ಲ. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಪಾಳು ಬಿದ್ದಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.”

¶ ತರುವಾಯ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕೆ ಆತನ ಹತ್ತಿರಕ್ಕೆ ಬಂದರು.