TSK

TSK · ಹಗ್ಗಾಯ 2:20

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.

ಅವರು ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಬಂದು ತಮ್ಮ ದೇವರಾದ ಯೆಹೋವನ ಆಲಯದ ನಿರ್ಮಾಣ ಕಾರ್ಯಕ್ಕೆ ಕೈ ಹಾಕಿದರು.

¶ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು.

¶ ಅರಸನಾದ ದಾರ್ಯಾವೆಷನ ಆಳ್ವಿಕೆಯ ನಾಲ್ಕನೆಯ ವರ್ಷದ ಕಿಸ್ಲೇವ್ ಎಂಬ ಒಂಭತ್ತನೆಯ ತಿಂಗಳಿನ ನಾಲ್ಕನೆಯ ದಿನದಲ್ಲಿ ಯೆಹೋವನು ಜೆಕರ್ಯನಿಗೆ ಒಂದು ವಾಕ್ಯವನ್ನು ದಯಪಾಲಿಸಿದನು.