TSK

TSK · ಇಬ್ರಿಯರಿಗೆ 10:1

مراجع Treasury of Scripture Knowledge في ಕನ್ನಡ IRV.

العودة إلى المقطع

ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ.

ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಪ್ರತಿರೂಪವೂ, ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.

¶ ಕ್ರಿಸ್ತನಾದರೋ ಈಗ ದೊರೆತಿರುವ ಶುಭಗಳ ಮಹಾಯಾಜಕನಾಗಿ ಬಂದು, ಮನುಷ್ಯರ ಕೈಯಿಂದ ಕಟ್ಟಲ್ಪಡದಂಥದೂ, ಇಹಲೋಕದ ಸೃಷ್ಟಿಗೆ ಸಂಬಂಧಪಡದಂಥದೂ, ಶ್ರೇಷ್ಠವಾದುದೂ, ಬಹು ಪರಿಪೂರ್ಣವಾದುದೂ ಆಗಿರುವ ಗುಡಾರದಲ್ಲಿ ಸೇವೆ ಮಾಡುವವನಾಗಿ,

ಇದಲ್ಲದೆ, ಮಹಾಯಾಜಕನು ವರ್ಷ ವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಅತಿ ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ, ಕ್ರಿಸ್ತನು ತನ್ನನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಅಲ್ಲಿಗೆ ಪ್ರವೇಶಿಸಲಿಲ್ಲ.

¶ ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.