¶ ರಾತ್ರಿಯ ಎರಡನೆಯ ಜಾವದಲ್ಲಿ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ (ಶತ್ರುಗಳ) ಪಾಳೆಯದ ಅಂಚಿಗೆ ಬಂದು, ಕೊಂಬುಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.
TSK
TSK · ಇಬ್ರಿಯರಿಗೆ 11:34
مراجع Treasury of Scripture Knowledge في ಕನ್ನಡ IRV.
ಅವರ ತೊಡೆ, ಸೊಂಟಗಳನ್ನು ಮುರಿದು, ಅವರನ್ನು ಸಂಹರಿಸಿ, ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.
ಆಕೆಯು ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ, ಅವನನ್ನು ದುರ್ಬಲಪಡಿಸಿದಳು. ಅವನ ಶಕ್ತಿಯು ಅವನನ್ನು ಬಿಟ್ಟು ಹೋಯಿತು,
ಈ ಪ್ರಕಾರ ದಾವೀದನು ಕತ್ತಿಯಿಂದಲ್ಲ ಬರೀ ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಸೋಲಿಸಿ, ಕೊಂದು ಹಾಕಿದನು ಫಿಲಿಷ್ಟಿಯರು ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಓಡಿಹೋದರು.
¶ ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುತ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.
ಆಗ ರೆಫಾಯರಲ್ಲೊಬ್ಬನಾದ ಇಷ್ಬಿಬೆನೋಬ್ ಎಂಬುವನು ದಾವೀದನನ್ನು ಕೊಲ್ಲುಬೇಕೆಂದಿದ್ದನು. ಅವನ ತಾಮ್ರದ ಬರ್ಜಿಯು ಮುನ್ನೂರು ಶೆಕಲ್ (ಬೆಳ್ಳಿನಾಣ್ಯ) ತೂಕದ್ದು. ಅವನು ಸೊಂಟಕ್ಕೆ ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು.
ಆಗ ಎಲೀಷನು ಅವನಿಗೆ, “ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ” ಎಂದು ಹೇಳಿ,
ಅನಂತರ ಯೆಶಾಯನು, ಒಂದು ಅಂಜೂರಹಣ್ಣನ್ನು ತೆಗೆದು ಅವನ ಗಾಯದ ಮೇಲೆ ಇಟ್ಟಾಗ ಹಿಜ್ಕೀಯನು ಗುಣಹೊಂದಿದನು.
¶ ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲರ ರಾಜನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ, ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಕೋಟೆಯನ್ನು ಭದ್ರಪಡಿಸಿದನು.
¶ ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು.
¶ ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಬಳಿಕ ಯೆಹೋವನು ಅವನ ದುಸ್ಥಿತಿಯನ್ನು ಹೋಗಲಾಡಿಸಿ, ಅವನ ಸೊತ್ತನ್ನು ಮೊದಲಿಗಿಂತ ಎರಡರಷ್ಟಾಗಿ ಹೆಚ್ಚಿಸಿದನು.
ಮನುಷ್ಯರು ನಮ್ಮ ತಲೆಗಳ ಮೇಲೆಯೇ, ತಮ್ಮ ರಥಗಳನ್ನು ಹಾಯಿಸುವಂತೆ ಮಾಡಿದಿ. ನಾವು ಬೆಂಕಿಯನ್ನೂ, ನೀರನ್ನೂ ದಾಟಬೇಕಾಯಿತು; ಆದರೂ ಸುಸ್ಥಿತಿಗೆ ನಮ್ಮನ್ನು ನಡೆಸಿದಿ.
ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.
¶ ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.
¶ ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.