ನೋಡಿರಿ, ಯೆಹೋವನು ನಿಮಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಅಪ್ಪಣೆಕೊಟ್ಟಿರುವುದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವ ಸ್ಥಳದಲ್ಲಿ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು” ಎಂದು ಹೇಳಿದನು.
TSK
TSK · ಇಬ್ರಿಯರಿಗೆ 12:25
مراجع Treasury of Scripture Knowledge في ಕನ್ನಡ IRV.
ನೀವು ಆತನನ್ನು ಹಿಂಬಾಲಿಸದೆ ಇರುವ ಕಾರಣ ಆತನು ಆ ಜನರನ್ನು ಮರುಭೂಮಿಯಲ್ಲಿ ಇರಿಸಿದರೆ, ಈ ಸಮಸ್ತ ಜನಾಂಗವನ್ನು ನೀವೇ ನಾಶ ಮಾಡುವಿರಿ” ಎಂದು ಹೇಳಿದನು.
ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,
ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.
ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ;
ನನ್ನ ಉಪದೇಶವನ್ನು ಕೇಳಿರಿ, ಅದನ್ನು ಬಿಡದೆ ಜ್ಞಾನವಂತರಾಗಿರಿ.
ಶಿಕ್ಷೆಯನ್ನು ತಿರಸ್ಕರಿಸುವವನು ತನ್ನನ್ನೇ ನಿರಾಕರಿಸಿಕೊಳ್ಳುವನು, ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು.
ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.
ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ, ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.”
ಆಗ ಯೇಸು ಅವನಿಗೆ; ‹“ನೋಡು, ಯಾರಿಗೂ ಹೇಳಬೇಡ;›‹ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;”›‹ಅದು ಅವರಿಗೆ ಸಾಕ್ಷಿಯಾಗಲಿ› ಎಂದು ಹೇಳಿದನು.
¶ “ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.
ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು.
ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು.
ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.
¶ ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.
ಆದರೆ ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು.