ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.
TSK
TSK · ಇಬ್ರಿಯರಿಗೆ 12:28
مراجع Treasury of Scripture Knowledge في ಕನ್ನಡ IRV.
ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.
ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
¶ “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.
ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.
ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು.
ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.
ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.
ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.
ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.
¶ ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.
ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.
¶ ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.
ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.
ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.”