TSK

TSK · ಇಬ್ರಿಯರಿಗೆ 13:4

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು.

ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.

ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ, ಎಂಬುವವರು “ಹುಲ್ದ” ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ, ತಿಕ್ವನ ಮಗನೂ, ಯಾಜಕವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಪತಿ. ಈಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸಿಸುತ್ತಿದ್ದಳು.

ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?

¶ ಅನಂತರ, “ನಾನು ನನ್ನ ಹೆಂಡತಿಯೊಡನೆ ಸಂಗಮಿಸಲು ಆಕೆಯು ಬಸುರಾಗಿ ಗಂಡು ಮಗುವನ್ನು ಹೆತ್ತಳು. ಆಗ ಯೆಹೋವನು ನನಗೆ, ಅದಕ್ಕೆ ‘ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು’ ಎಂದು ಹೇಳಿದನು.

ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.”

ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.

ಕ್ರೈಸ್ತವಿಶ್ವಾಸಿಯಾದ ಹೆಂಡತಿಯನ್ನು ಕರೆದುಕೊಂಡು ಸಂಚರಿಸುವುದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ, ಕರ್ತನ ಸಹೋದರರಂತೆಯ, ಮತ್ತು ಕೇಫನಂತೆಯೂ ನಮಗೆ ಹಕ್ಕಿಲ್ಲವೇ?

¶ ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ,

ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.

ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.

ಸಭಾಸೇವಕರು ಏಕಪತ್ನಿಯುಳ್ಳವರೂ, ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ನಡಿಸುವವರೂ ಆಗಿರಬೇಕು.

ಆದ್ದರಿಂದ ಯೌವನ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.

ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.