ನನ್ನ ಸೇವಕನಾದ ಮೋಶೆಯು ಅಂಥವನಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ.
TSK
TSK · ಇಬ್ರಿಯರಿಗೆ 3:2
مراجع Treasury of Scripture Knowledge في ಕನ್ನಡ IRV.
ಆಗ ಸಮುವೇಲನು, “ನಿಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರೆತರುವುದಕ್ಕಾಗಿ ಮೋಶೆ ಹಾಗೂ ಆರೋನರನ್ನು ನೇಮಿಸಿದ ಯೆಹೋವನೇ ಇದಕ್ಕೆ ಸಾಕ್ಷಿ.
‹ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.›
‹ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.›
ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.
ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.
ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ ಸಾಕ್ಷಿಕೊಟ್ಟಿದ್ದಾನೇ.