TSK

TSK · ಇಬ್ರಿಯರಿಗೆ 3:5

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಾಯೇಲರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯನ್ನಿಟ್ಟರು.

ನೀನು ನಡಿಸುವ ಈ ಮಹತ್ಕಾರ್ಯಗಳಿಗೆ ಸಮಾನವಾದ ಕಾರ್ಯಗಳನ್ನು ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ ಬೇರೆ ಯಾವ ದೇವರು ನಡೆಸಲಾರನು?

¶ ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮರಣ ಹೊಂದಿದನು.

ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.

ಜನರು ಅದರ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.

ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ, ಆಜ್ಞಾವಿಧಿನಿಯಮಗಳನ್ನೂ ಅವರಿಗೆ ಕಲಿಸಿದೆ.

‹ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?›

¶ ಕರ್ತನು ಹೇಳಿದ್ದೇನಂದರೆ, ‹“ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?›

ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.

‹ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.›

ಮೋಶೆಯು ಹೇಳಿದ್ದೇನಂದರೆ, ‘ದೇವರಾಗಿರುವ ಕರ್ತನು ನನ್ನ ಹಾಗೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಎಬ್ಬಿಸುವನು; ಆತನು ಹೇಳುವ ಎಲ್ಲಾ ಮಾತುಗಳಿಗೆ ನೀವು ಕಿವಿಗೊಡಬೇಕು.

¶ ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.

¶ ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ, ಯೇಸುವೂ ತನ್ನನ್ನು ನೇಮಕ ಮಾಡಿರುವಾತನಿಗೆ ನಂಬಿಗಸ್ತನಾಗಿದ್ದಾನೆ.

ಈ ಗುಡಾರದ ಮೊದಲನೆಯ ಭಾಗವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲ ಎಂಬುದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.

¶ ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.