TSK

TSK · ಇಬ್ರಿಯರಿಗೆ 5:1

مراجع Treasury of Scripture Knowledge في ಕನ್ನಡ IRV.

العودة إلى المقطع

¶ ನನಗೆ ಯಾಜಕನ ಸೇವೆ ಮಾಡುವುದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವರನ್ನೂ ಇಸ್ರಾಯೇಲ್ಯರಿಂದ ನಿನ್ನ ಹತ್ತಿರಕ್ಕೆ ಕರೆದುಕೊಂಡು ಬಾ.

“ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,

¶ ತರುವಾಯ ಜನಸಮೂಹವು ಸಮರ್ಪಿಸುವ ಪಶುಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕ ಹೋತವನ್ನು ಮೊದಲನೆಯ ಪಶುವಿನಂತೆ ವಧಿಸಿ ಅವರಿಗೋಸ್ಕರ ದೋಷಪರಿಹಾರಕ್ಕಾಗಿ ಅದನ್ನು ಸಮರ್ಪಿಸಿದನು.

¶ ಆಗ ಯೆಹೋವನು ಆರೋನನಿಗೆ, “ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.

ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.

ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.

¶ ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.