ಆ ಕಾಲದಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿರುವಷ್ಟು ಬೆಲೆಯಿತ್ತು. ದಾವೀದನೂ ಮತ್ತು ಅಬ್ಷಾಲೋಮನೂ ಅವನ ಆಲೋಚನೆಗಳನ್ನು ಗೌರವಿಸುತ್ತಿದ್ದರು.
TSK
TSK · ಇಬ್ರಿಯರಿಗೆ 5:12
مراجع Treasury of Scripture Knowledge في ಕನ್ನಡ IRV.
ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.
ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬುದಾಗಿ ಇವರಿಗೆ ಪರಿಣಮಿಸುವುದು; ಇವರು ನಡೆದು ಹಿಂದೆ ಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು.
ಅದಕ್ಕೆ ಯೇಸು, ‹“ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ”› ಅಂದನು.
ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪೂರ್ವಿಕರಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ.
¶ ಆದರೆ ಸಹೋದರರೇ ನಾನಂತೂ ಆತ್ಮೀಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
¶ ಕಡೆಯದಾಗಿ ನನ್ನ ಸಹೋದರರೇ, ಕರ್ತನಲ್ಲಿ ಸಂತೋಷಪಡಿರಿ. ಮೊದಲು ತಿಳಿಸಿದ ಅದೇ ಮಾತುಗಳನ್ನು ಪುನಃ ನಿಮಗೆ ಬರೆಯುವುದಕ್ಕೆ ನನಗೇನೂ ಬೇಸರವಿಲ್ಲ, ಅವುಗಳು ನಿಮ್ಮನ್ನು ಭದ್ರಪಡಿಸುವವು.
ಹಾಗೆಯೇ, ವೃದ್ಧ ಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಅಧೀನರು ಆಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು.
¶ ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ.
ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.