ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.
TSK
TSK · ಇಬ್ರಿಯರಿಗೆ 7:28
مراجع Treasury of Scripture Knowledge في ಕನ್ನಡ IRV.
ಆತನು ಅವರಿಗೆ, ‹“ನೀವು ಹೋಗಿ ‘ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ’ ಎಂದು ಆ ನರಿಗೆ ಹೇಳಿರಿ.›
ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.
ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.
¶ ಮನುಷ್ಯರೊಳಗಿಂದ ಪ್ರತಿಯೊಬ್ಬ ಮಹಾಯಾಜಕನೂ ಆರಿಸಲ್ಪಟ್ಟು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ನಡೆಸುವುದಕ್ಕಾಗಿ ನೇಮಿಸಲಾಗಿದ್ದು. ಅವನು ಪಾಪಗಳ ನಿವಾರಣೆಗಾಗಿ ಕಾಣಿಕೆಗಳನ್ನು ಮತ್ತು ಯಜ್ಞಗಳನ್ನು ಸಮರ್ಪಿಸಬೇಕು.
ಹೀಗೆ ಆತನು ಮಗನಾಗಿದ್ದರೂ ತಾನು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು.
ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ “‘ನೀನು ಸದಾಕಾಲವೂ ಯಾಜಕನಾಗಿದ್ದೀ’ ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ” ಎಂಬುದಾಗಿ ಹೇಳಿದ್ದಾನೆ.