ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿಮಿತ್ತ ನನಗೆ ಹಿತವಾಗುವುದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು” ಎಂದು ಹೇಳಿದನು.
TSK
TSK · ಇಬ್ರಿಯರಿಗೆ 7:6
مراجع Treasury of Scripture Knowledge في ಕನ್ನಡ IRV.
¶ ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ;
ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.
¶ ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ; ನಂಬಿಕೆಯಿಂದ ಬರುವ ನೀತಿಯಾಗಿದೆ.
ಹಾಗೆಯೇ, ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. ಆ ಒಬ್ಬನು ಕ್ರಿಸ್ತನೇ.
¶ ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು.
¶ ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.