TSK

TSK · ಇಬ್ರಿಯರಿಗೆ 9:1

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ನಾನು ಅವರ ಮಧ್ಯದಲ್ಲಿ ವಾಸಮಾಡುವುದಕ್ಕೆ ನನಗೆ ಒಂದು ಗುಡಾರವನ್ನು ಕಟ್ಟಿಸಬೇಕು.

ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ನಿಯಮಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು’” ಎಂದು ಹೇಳಿದನು.

ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಉಳಿಸಬಾರದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು. ಅಂತೂ ಪಸ್ಕಹಬ್ಬದ ವಿಷಯವಾಗಿರುವ ವಿಧಿನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು.

ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.

ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.

ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ.