TSK

TSK · ಇಬ್ರಿಯರಿಗೆ 9:2

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ನಾನು ಅವರ ಮಧ್ಯದಲ್ಲಿ ವಾಸಮಾಡುವುದಕ್ಕೆ ನನಗೆ ಒಂದು ಗುಡಾರವನ್ನು ಕಟ್ಟಿಸಬೇಕು.

ಆ ಪರದೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ಪರದೆಯು ಪವಿತ್ರಸ್ಥಾನವೆಂಬುದನ್ನೂ ಮತ್ತು ಮಹಾಪವಿತ್ರಸ್ಥಾನವನ್ನೂ ವಿಂಗಡಿಸುವುದು.

¶ ಅವರು ನನಗೆ ಯಾಜಕರಾಗುವಂತೆ ಅವರನ್ನು ಪ್ರತಿಷ್ಠಿಸುವುದಕ್ಕೆ ನೀನು ಮಾಡಬೇಕಾಗಿರುವ ಕಾರ್ಯಗಳೆನೆಂದರೆ; ಒಂದು ಹೋರಿ ಮತ್ತು ಕರುವನ್ನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ತೆಗೆದುಕೊಳ್ಳಬೇಕು.

¶ ಆ ಕೆಲಸ ಮಾಡುತ್ತಿದ್ದ ಜ್ಞಾನಿಗಳೆಲ್ಲರು ಹೊಸೆದ ನಾರಿನ ಹತ್ತು ಪರದೆಗಳಿಂದ ಗುಡಾರವನ್ನು ಮಾಡಿ ಆ ಪರದೆಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರಗಳಿಂದ ನೇಯ್ಗೆಯವರಂತೆ ಕೆರೂಬಿಗಳನ್ನು ಮಾಡಿ ಅದಕ್ಕೆ ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು.

¶ ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಅದನ್ನು ಮಾಡಿದರು.

“ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ದೇವದರ್ಶನದ ಗುಡಾರವನ್ನು ತೆರೆಯಬೇಕು.

ಮೋಶೆಯು ಗುಡಾರವನ್ನು ತೆರೆದು ಅದಕ್ಕೆ ಮೆಟ್ಟುವಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು.

¶ “ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು.