TSK

TSK · ಇಬ್ರಿಯರಿಗೆ 9:26

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು ಅದರ ತಲೆಯ ಮೇಲೆ ಎರಡು ಕೈಗಳನ್ನು ಇಟ್ಟು, ಇಸ್ರಾಯೇಲರ ಎಲ್ಲಾ ಪಾಪಗಳನ್ನು, ದ್ರೋಹಗಳನ್ನು ಮತ್ತು ಅಪರಾಧಗಳನ್ನು ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು.

¶ ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.

ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.

ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು.

‹ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.›

‹ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು,›‹ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.›

¶ ಆದರೆ ನಾನು ಹೇಳುವುದೇನಂದರೆ, ವಾರಸುದಾರನು, ತಾನು ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆಯೇ ಇರುವನು.

ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.

ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.

ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?

ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.

¶ ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.

ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.

ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.

ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.