ಇಸ್ರಾಯೇಲರ ಅರಸನೇ ಯಾರನ್ನು ಹಿಂಬಾಲಿಸಿ ಹೊರಟಿರುವೇ? ಯಾರನ್ನು ಹಿಡಿಯಬೇಕೆಂದಿರುತ್ತೀ? ಸತ್ತ ನಾಯಿಯನ್ನೋ? ಒಂದು ಬಡ ನೊಣವನ್ನೋ?.
TSK
TSK · ಹೋಶೇ 10:13
مراجع Treasury of Scripture Knowledge في ಕನ್ನಡ IRV.
ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.
ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.
ಸತ್ಯದ ತುಟಿ ಶಾಶ್ವತ, ಸುಳ್ಳಿನ ನಾಲಿಗೆ ಕ್ಷಣಿಕ.
ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು.
¶ ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.
ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.
ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.