TSK

TSK · ಹೋಶೇ 10:6

مراجع Treasury of Scripture Knowledge في ಕನ್ನಡ IRV.

العودة إلى المقطع

ಅಶ್ಶೂರದ ಅರಸನಾದ ಶಲ್ಮನೆಸರನು ಹೋಶೇಯನಿಗೆ ವಿರುದ್ಧವಾಗಿ ಬಂದಾಗ, ಹೋಶೇಯನು ಅವನಿಗೆ ಅಧೀನನಾಗಿ ಕಪ್ಪಕೊಡುವವನಾದನು.

“ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ. ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.

ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ, ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು.

ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು.

ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.

ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.

¶ ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು.

ಅವರ ದೇವರುಗಳನ್ನೂ, ಎರಕದ ಬೊಂಬೆಗಳನ್ನೂ, ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ, ಸೂರೆ ಮಾಡಿಕೊಂಡು ಐಗುಪ್ತಕ್ಕೆ ಬಂದು, ಕೆಲವು ವರ್ಷಗಳ ತನಕ ಉತ್ತರ ದಿಕ್ಕಿನ ರಾಜನ ತಂಟೆಗೆ ಹೋಗುವುದಿಲ್ಲ.

ಗಾಳಿಯು ಅವರನ್ನು ತನ್ನ ರೆಕ್ಕೆಗಳಲ್ಲಿ ಸುತ್ತಿಕೊಂಡು ಹೋಗುವುದು; ತಾವು ಮಾಡುತ್ತಿದ್ದ ವಿಗ್ರಹದ ಯಜ್ಞಗಳಿಗೆ ನಾಚಿಕೆಪಡುವರು.

ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.

ಅದರ ದುರಾಲೋಚನೆಗಳ ನಿಮಿತ್ತ ಖಡ್ಗವು ಅದರ ಪಟ್ಟಣಗಳ ಮೇಲೆ ಬೀಸಲ್ಪಟ್ಟು, ಅಲ್ಲಿನ ಕೋಟೆಗಳನ್ನು ಧ್ವಂಸಮಾಡಿ ನುಂಗಿಬಿಡುವುದು.