TSK

TSK · ಹೋಶೇ 2:12

مراجع Treasury of Scripture Knowledge في ಕನ್ನಡ IRV.

العودة إلى المقطع

ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.

ಇನ್ನು ಸ್ವಲ್ಪ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು, ಈಗಿನ ತೋಟವು ಅರಣ್ಯವಾಗಿ ಕಾಣಿಸುವುದು.

ನಾನು ಇವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಿಬಿಡುವೆನು. ದ್ರಾಕ್ಷಿಯ ಬಳ್ಳಿಯಲ್ಲಿಯೂ, ಅಂಜೂರದ ಮರದಲ್ಲಿಯೂ ಹಣ್ಣಿರುವುದಿಲ್ಲ, ಎಲೆಯು ಬಾಡುವುದು; ನಾನು ಹಾಳುಮಾಡುವವರನ್ನು ಅವರಿಗೆ ನೇಮಿಸುವೆನು” ಇದು ಯೆಹೋವನ ನುಡಿ.

“ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ

ನಾನು ಎಫ್ರಾಯೀಮಿಗೆ ಸಿಂಹವೂ, ಯೆಹೂದ ಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಯಾರೂ ಬಿಡಿಸರು.

ಮರಿಗಳನ್ನು ಕಳಕೊಂಡ ಕರಡಿಯಂತೆ ಅವರಿಗೆ ಎದುರು ಬಿದ್ದು ಅವರ ಎದೆಯನ್ನು ಸೀಳಿಬಿಡುವೆನು; ಅಲ್ಲೇ ಮೃಗರಾಜನಂತೆ ಅವರನ್ನು ನುಂಗುವೆನು; ಭೂಜಂತುಗಳು ಅವರನ್ನು ಹರಿದುಬಿಡುವವು.